ಧಾರವಾಡ : ತೋಟಗಾರಿಕೆ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ತೋಟಗಾರಿಕೆ ಮಿಷನ್, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ, ಕೃಷಿಭಾಗ್ಯ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಜಾರಿಯಾಗುತ್ತಿರುವ ಜನಪರ ಯೋಜನೆಗಳನ್ನು ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನದೊಂದಿಗೆ ಅನುಷ್ಠಾನಗೊಳಿಸಬೇಕು. ಅಲ್ಪಸಂಖ್ಯಾತರ ಶಿಕ್ಷಣ, ಸಮಗ್ರ ವಿಕಾಸಕ್ಕೆ ಸರ್ಕಾರದ ಯೋಜನೆಗಳ ಸದ್ಬಳಕೆಯಾಗಬೇಕು. ಜಿಲ್ಲೆಯ ವಕ್ಫ್ ಸಂಸ್ಥೆಗಳ ಆಸ್ತಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಹೇಳಿದರು.